COMPLAINT AGAINST MINISTER: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ಆರೋಪ: ಸಚಿವರ ವಿರುದ್ಧ ಇಡಿ ಗೆ ದೂರು

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪೂರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇಡಿಗೆ ದೂರು ನೀಡಿದ್ದಾರೆ.

ಇ-ಮೇಲ್ ಮೂಲಕ ಇಡಿಗೆ ಕಲ್ಲಹಳ್ಳಿ ದೂರು ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಹಣ ಹೊಂದಿಸಲು ವರ್ಗಾವಣೆ ದಂಧೆ ನಡೆಸಿದ್ದು, ಅಧಿಕಾರಿಗಳ ವರ್ಗಾವಣೆಗೆ ಸಚಿವರು ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
30 ಲಕ್ಷದಿಂದ 3 ಕೋಟಿವರೆಗೆ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ ಅವರು, ಒಟ್ಟು 18 ಕೋಟಿ ರೂಪಾಯಿ ಲಂಚ ಸ್ವೀಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.


ಕೋಲಾರದ ಅಬಕಾರಿ ಡಿಸಿ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ಅವರಿಂದ ಹಣ ಪಡೆದಿದ್ದಾರೆ, ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ.

More News