ತುಮಕೂರು : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಮತಿ ಪಡೆಯದೇ ಕೇಸರಿ ಧ್ವಜ ಹಾರಿಸಿದ್ದರಿಂದ ಪಂಚಾಯತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು ರಾಷ್ಟ್ರ ಧ್ವಜ ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.
ಧ್ವಜ ತೆಗೆದಿದ್ದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಕೇಸರಿ ಧ್ವಜ ಹಾರಿಸಲು ತಕರಾರಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಕೇಸರಿ ಧ್ವಜ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಎಂದು ಪರಮೇಶ್ವರ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ನಾವೂಗಳೂ ಹಿಂದೂಗಳೇ. ಕಾಂಗ್ರೆಸ್ಸಿನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ ಎಂದು ಆರೋಪಿದ ಅವರು, ರಾಜ್ಯದ ಕಾನೂನು ಮುರಿಯುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.
ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ @BJP4Karnataka ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ… pic.twitter.com/2FTVglwH7T
— Siddaramaiah (@siddaramaiah) January 28, 2024
ಸಿಎಂ ಪ್ರತಿಕ್ರಿಯೆ
ಈ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಮದಲ್ಲಿ ಪ್ರತಿಕ್ರಿಯೆ ನೀಡಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದಿದ್ದಾರೆ.
ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ @BJP4Karnataka ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಬಿಜೆಪಿ ನಾಯಕರು ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು.
ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ.
ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.




