THERE HAS BEEN A 96% INCREASE IN CHILD RAPE CASES: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ‘ಅನ್ಯಾಯದ ಕಾಲ’ದಲ್ಲಿ ಮಕ್ಕಳೂ ಸುರಕ್ಷಿತರಿಲ್ಲ: ಕಾಂಗ್ರೆಸ್

ನವದೆಹಲಿ: ಕಳೆದ ಐದು ವರ್ಷದಲ್ಲಿ ಅಂದರೆ 2016ರಿಂದ 2022ರ ಅವಧಿಯಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಳ ಕಂಡಿವೆ ಎಂದು ಸ್ವಯಂ ಸೇವಾ ಸಂಸ್ಥೆ ಮಾಡಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದ್ದು, ಮೋದಿ ಸರ್ಕಾರದ ಅನ್ಯಾಯದ ಕಾಲದಲ್ಲಿ ಮಕ್ಕಳೂ ಸುರಕ್ಷಿತರಿಲ್ಲ ಎಂದು ಟೀಕಿಸಿದೆ.

ಸ್ವಯಂ ಸೇವಾ ಸಂಸ್ಥೆ CRY ಬಿಡುಗಡೆ ಮಾಡಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, 2016ರಿಂದ 2022 ರ ಅವಧಿಯಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಶೇಕಡಾ 96 ರಷ್ಟು ಹೆಚ್ಚಳ ಕಂಡಿವೆ ಎಂದು ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಉಲ್ಲೇಖಿಸಿ, ಕಳೆದ ಹತ್ತು ವರ್ಷಗಳ ಮೋದಿ ಸರ್ಕಾರದ ಅನ್ಯಾಯ ಕಾಲದ ನೋವು ಇಂದು ಸಮಾಜದ ಪ್ರತಿಯೊಬ್ಬರೂ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಬರೆದುಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

More News

You cannot copy content of this page