ಇಸ್ಲಾಮಾಬಾದ್ : ಪಾಕಿಸ್ತಾನ ದೇಶಕ್ಕೆ ಸಂಬಂಧಿಸಿದ ರಹಸ್ಯ ದಾಖಲೆ ಸೋರಿಕೆ ಪ್ರಕರಣ ಸಂಬಂಧ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಶಿ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಫೆಬ್ರವರಿ 8 ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದಕ್ಕೂ ಮುನ್ನಾ ಈ ತೀರ್ಪು ಹೊರಬಿದ್ದಿದ್ದು, ಇದೀಗ ಅಲ್ಲಿನ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿದೆ. ಇಮ್ರಾನ್ ಖಾನ್ ಅವರು ಭ್ರಷ್ಟಾಚಾರ ಪ್ರಕಣದಲ್ಲಿ ಈಗಾಗಲೇ ಮೂರು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
ಮಾರ್ಚ್ 2022 ರಲ್ಲಿ ವಾಷಿಂಗ್ಟನ್ ನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯು ಕಳುಹಿಸಿದ ಸಂದೇಶವನ್ನು ಬಹಿರಂಗಗೊಳಿಸಿ ಗೌಪ್ಯತೆಯ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಯು ಕಳೆದ ವರ್ಷ ಅಗಲ್ಸ್ಟ 15 ರಂದು ಇಮ್ರಾನ್ ಖಾನ್ ಮತ್ತು ಖುರೇಶಿ ವಿರುದ್ಧ ಪ್ರಕರಣ ದಾಖಲಿಸಿತ್ತು.