ರಾಂಚಿ: ಜಾರಿ ನಿರ್ದೇಶನಾಲಯದಿಂದ ಬಂಧನದ ಭೀತಿ ಎದುರಿಸುತ್ತಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಯಾರ ಸಂಪರ್ಕಕ್ಕೂ ಸಿಗದೇ ಅಜ್ಞಾತ ಸ್ಥಳದಲ್ಲಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.
ಇನ್ನೊಂದೆಡೆ ಜಾರ್ಖಂಡ್ ಆಡಳಿತಾರೂಢ ಪಕ್ಷ ಜಾರ್ಖಂಡ್ ಮುಕ್ತಿ ಮೋರ್ಚಾ ತನ್ನ ಎಲ್ಲಾ ಶಾಸಕರಿಗೆ ರಾಜಧಾನಿಗೆ ಆಗಮಿಸುವಂತೆ ಸೂಚನೆ ನೀಡಿದ್ದಾರೆ.
ಜಾರ್ಖಂಡ್ ಮುಕ್ತಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಅವರು ಮಾತನಾಡಿದ, ಮುಖ್ಯಮಂತ್ರಿ ಅವರು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ತೆರಳಿದ್ದಾರೆ. ಅವರು ಇಂದು ಹಿಂದಿರುಗುತ್ತಾರೆ, ಜನವರಿ 31 ಕ್ಕೆ ಅವರು ವಿಚಾರಣೆ ಎದುರಿಸಲು ಸಿದ್ದರಿದ್ದಾರೆ. ಕಂಕೆ ರಸ್ತೆಯಲ್ಲಿರುವ ಸಿಎಂ ಅವರ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಗೆ ಸಿಎಂ ಇಡಿ ಅಧಿಕಾರಿಗಳ ವಿಚಾರಣೆಗೆ ಸಿದ್ದರಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾವೂ ಕ್ಲಿಯರ್ ಇರುವಾಗ ಈ ಗೊಂದಲವನ್ನು ಸೃಷ್ಠಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಅವರು, ರಾಜಕೀಯ ಗೊಂದಲ ಸೃಷ್ಟಿಸುತ್ತಿರುವುದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.
ಈ ಮಧ್ಯೆ ಬಿಜೆಪಿ ಸಂಸದ ನಿಶಾಂತ್ ದುಬೆ ಸಮಾಜಿಕ ಜಾಲತಾಣದಲ್ಲಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೇನ್ ನೂತನ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಹಾಗೆಯೇ ತಲೆಮರೆಸಿಕೊಂಡಿರುವ ಹೇಮಂತ್ ಸೊರೇನ್ ಹೇಗೆ ರಾಜ್ಯದ ಜನರನ್ನು ರಕ್ಷಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಸಿಎಂ ತಮ್ಮನ್ನು ತಾವು ತಪ್ಪಿತಸ್ಥರೆಂದು ಸಾಭೀತುಪಡಿಸಿಕೊಳ್ಳುತ್ತಿದ್ದಾರೆ. ತನಿಖಾ ಸಂಸ್ಥೆಯನ್ನು ಎದುರಿಸಲಾಗದೇ ಲಾಯನ ಮಾಡಿದ್ದಾರೆ. ದೇಶ, ವಿದೇಶದಲ್ಲಿ ಅವಮಾನ ಎದುರಿಸುತ್ತಿದ್ದಾರೆ. ಇಂತಹ ವ್ಯಕ್ತಿ ಯಿಂದ ಅಧಿಕಾರಿಗಳನ್ನು ಮತ್ತು ರಾಜ್ಯದ ಜನರನ್ನು ಹೇಗೆ ರಕ್ಷಿಸುವುದಕ್ಕೆ ಸಾಧ್ಯೆ ಎಂದು ಪ್ರಶ್ನಿಸಿದ್ದಾರೆ.