Search

IMRAN KHAN WIFE JAILED FOR 14 YEARS: ತೋಷಖಾನಾ ಭ್ರಷ್ಟಾಚಾರ ಪ್ರಕರಣ: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿಗೆ 14 ವರ್ಷ ಜೈಲು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದ ತೋಷಖಾನಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೇಬಿ ಅವರಿಗೆ ನ್ಯಾಯಾಲಯ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಮುಂಬರುವ ಫೆಬ್ರವರಿ 8ರಂದು ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರುವ ನಿರೀಕ್ಷೆಯಲ್ಲಿದ್ದ ಇಮ್ರಾನ್ ಖಾನ್ ಅವರ ಯೋಚನೆಗೆ ಭಾರೀ ಹಿನ್ನೆಡೆಯಾಗಿದೆ.

ಮಂಗಳವಾರವಷ್ಟೇ ದೇಶದ ಸೂಕ್ಷ್ಮ ಮಾಹಿತಿಗಳ ಸೋರಿಕೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರಿಗೆ ಹತ್ತು ವರ್ಷಗಳ ಜೈಲು ಶಿಕ್ಷೆಯಾಗಿತ್ತು. ಇಂದು ಅವರ ಪತ್ನಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಪ್ರಕರಣದ ತೀರ್ಪಿನ ಸಂದರ್ಭದಲ್ಲಿ ಇಮ್ರಾನ್ ಅವರ ಪತ್ನಿ ನ್ಯಾಯಾಲಯದಲ್ಲಿ ಹಾಜರಿರಲಿಲ್ಲ. ಮುಂದಿನ ಹತ್ತು ವರ್ಷಗಳ ಕಾಲ ಯಾವುದೇ ಸರ್ಕಾರಿ ಹುದ್ದೆ ಅಲಂಕರಿಸದಂತೆ ನಿರ್ಬಂಧ ವಿಧಿಸಿ, ತಲಾ 787 ಮಿಲಿಯನ್ ಡಂದ ವಿಧಿಸಿದೆ.
ತೋಷಖಾನಾಗೆ ಬಂದ ಉಡುಗೊರೆಗಳ ಮಾಹಿತಿ ಬಹಿರಂಗಪಡಿಸದೇ ಇರುವುದು ಮತ್ತು ಕೆಲ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪ ಇಮ್ರಾನ್ ಖಾನ್ ಮೇಲಿದ್ದರಿಂದ ನ್ಯಾಯಾಲಯ ಈ ಶಿಕ್ಷೆ ಪ್ರಕಟಿಸಿದೆ.

More News

You cannot copy content of this page