ನವದೆಹಲಿ: ಪ್ರಸಕ್ತ ಕೇಂದ್ರ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ಮಂಡನೆಗೂ ಕೆಲವೇ ಗಂಟೆಗಳ ಮುಂಚೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗ್ರಾಹಕರಿಗೆ ದರ ಏರಿಕೆಯ ಶಾಕ್ ನೀಡಿದೆ.
ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್ ಗೆ 14 ರೂಪಾಯಿ ಏರಿಕೆ ಮಾಡಿ ಬರೆ ಎಳೆದಿದೆ. ಆದರೆ ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆಯು ಇಂದಿನಿಂದಲೇ ಜಾರಿಗೆ ಬರಲಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಗಳ ದರ ಬಹುತೇಕ ಪ್ರತಿತಿಂಗಳು ಬದಲಾಗುತ್ತಿದ್ದು, ಕಳೆದ ಮೂರು ವರ್ಷಗಲ್ಲಿ ಗೃಹ ಬಳಕೆಯ ಸಿಲಿಂಡರ್ ಬೆಲೆ 17 ಬಾರಿ ಬದಲಾವಣೆ ಕಂಡಿದೆ. ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ವೊಂದರ ಬೆಲೆ 1765.50 ರೂಪಾಯಿ. ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂಪಾಯಿ, ಮುಂಬೈನಲ್ಲಿ 1723.50 ರೂಪಾಯಿ, ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂಪಾಯಿಗೆ ತಲುಪಿದೆ.
ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಳೆದ ಅಗಸ್ಟ್ 30 ರಂದು ಕೊನೆಯದಾಗಿ ಬದಲಾವಣೆ ಕಂಡಿತ್ತು. ಆದಾದ ಬಳಿಕ ಯಾವುದೇ ಬದಲಾವಣೆ ಕಂಡಿಲ್ಲ.