ಹುಬ್ಬಳ್ಳಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಜನಸಾಮಾನ್ಯರ ಏಳ್ಗೆಯನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿಯವರ ಗುರಿಯಂತೆ 2047 ರವರೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ.
ವಿಪಕ್ಷಗಳು ಚುನಾವಣಾ ಬಜೆಟ್ ಆಗುತ್ತೆ ಅಂತಾ ಭಾವಿಸಿದ್ದೇವು. ಆದರೆ ಕೇಂದ್ರ ಸರ್ಕಾರ ಅಭಿವೃದ್ಧಿ ಪರ ಬಜೆಟ್ ಮಂಡಿಸಿದೆ.
ಹೀಗಾಗಿ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದರು.