Search

PAKISTAN GENRAL ELECTION TODAY: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ: ಬಿಗಿ ಭದ್ರತೆ ನಡುವೆ ಮತದಾನ ಆರಂಭ: ಮೊಬೈಲ್ ಸೇವೆ ಸ್ಥಗಿತ

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆಯ ಮತದಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಹಾಗೆಯೇ ದೇಶದಾದ್ಯಂತ ತಾತ್ಕಾಲಿಕವಾಗಿ ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ನಿನ್ನೆ ನಡೆದ ಬಾಂಬ್ ದಾಳಿಯಲ್ಲಿ ಅಮೂಲ್ಯ ಜೀವಗಳು ಕಳೆದುಹೋಗಿವೆ. ಸಂಬಾವ್ಯ ಬೆದರಿಕೆ ಕರೆಗಳನ್ನು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಭದ್ರತಾ ಕ್ರಮಗಳು ಅತ್ಯಗತ್ಯ ಇರುವ ಹಿನ್ನೆಲೆಯಲ್ಲಿ ಮೊಬೈಲ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪಾಕಿಸ್ತಾನದ ಸಚಿವಾಲಯ ತಿಳಿಸಿದೆ.

ಪಾಕಿಸ್ತಾನದ ಚುನಾವಣೆ ಆಯೋಗದ ಪ್ರಕಾರ 4,807 ಪುರುಷರು ಮತ್ತು 312 ಮಹಿಳೆಯರು ಮತ್ತು ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 5121 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಚೆಗೆ ಮುಕ್ತಾಯಗೊಳ್ಳಲಿದ್ದು, ದೇಶದಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ ಪಕ್ಷವು ಸದ್ಯದಲ್ಲಿ ಅತೀದೊಡ್ಡ ಪಕ್ಷವಾಗಿದೆ. ಎದುರಾಳಿ ಪಕ್ಷದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿದ್ದಾರೆ.
ಅದೇ ರೀತಿಯಲ್ಲಿ ಪಾಕಿಸ್ತಾನದ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ ಪೀಪಲ್ಸ್ ಪಕ್ಷ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯಲ್ಲಿ ಒಟ್ಟು 336 ಸ್ಥಾನಗಳನ್ನು ಒಳಗೊಂಡಿದೆ.

More News

You cannot copy content of this page