D K SHIVAKUMAR CASE: ಡಿಸಿಎಂ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಫೆ.19ಕ್ಕೆ ಮುಂದಿನ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿಯವರನ್ನು ಪ್ರತಿವಾದಿಯಾನ್ನಾಗಿಸಿ ಆದೇಶ ಮಾಡಿದೆ.
ಹಾಗೆಯೇ, ಡಿಸಿಎಂ ಡಿಕೆ ಶಿವಕುಮಾರ್ ಅವರ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರಿಂದ ವಿಚಾರಣೆ ಫೆ.29 ಕ್ಕೆ ನಿಗದಿಪಡಿಸಿ ಹೈಕೋರ್ಟ್ ಆದೇಶ ಮಾಡಿದೆ.
ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಹಿಂಪಡೆದದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇಂದು ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು.
ಡಿ ಕೆ ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡನೆ ಮಾಡಿದರು. ಅರ್ಜಿಗಳಿಗೆ ಡಿ ಕೆ ಶಿವಕುಮಾರ್ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆ ಮಾಡಲಾಯಿತು. ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರತಿವಾದಿಯಾಗಿಸಿ ಹೈಕೋರ್ಟ್ ಆದೇಶಿಸಿತು.

More News

You cannot copy content of this page