Speaker Khader Got Luxury Car: ಸ್ಪೀಕರ್ ಖಾದರ್ ಗೆ ಬಂತು ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ, ವಿಶೇಷ ಎಲ್ ಇ ಡಿ ಲೈಟ್!

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಇದೀಗ ಐಶಾರಾಮಿ ಕಾರು ಬಂದಿದೆ. ಸಚಿವಾಲಯದಿಂದ ವಿಶೇಷ ಕಾರಿನ‌ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಐಶಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಕೂಡಾ ಹೊಂದಿದೆ.

ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ.

ಕಪ್ಪು ಬಣ್ಣದ ಫಾರ್ಚೂನರ್( ಇ ) ಕಾರಿನ ದರ 33.43 ಲಕ್ಷ ( ಪೆಟ್ರೋಲ್) ಹಾಗೂ ಡೀಸಿಲ್ ಕಾರಿನ ದರ 35.93 ರಿಂದ 51.44 ಲಕ್ಷ ಆಗುತ್ತದೆ. ಆದರೆ ಈ ಫಾರ್ಚೂನರ್ ಗೆ ವಿಶೇಷ ವಿನ್ಯಾಸ ಮಾಡಿರುವುದರಿಂದ ಒಟ್ಟು 41 ಲಕ್ಷ ವೆಚ್ಚವಾಗಿದೆ ಎಂದು ತಿಳಿದುಬಂದಿದೆ.

ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದೆ. ರಾಜ್ಯಪಾಲರಿಗೆ ಹೊರತಾಗಿ ಸ್ಪೀಕರ್ ಗೆ ಮಾತ್ರ ಇದನ್ನು ಹಾಕಲು ಅವಕಾಶ ಇದೆ.

ಇತ್ತೀಚೆಗೆ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೆ ಐಶಾರಾಮಿ ಕಾರನ್ನು ನೀಡಲಾಗಿತ್ತು. ಇದೀಗ ಸ್ಪೀಕರ್ ಯು.ಟಿ ಖಾದರ್ ಅವರಿಗೂ ಈ ಐಶಾರಾಮಿ ಕಾರು ಬಂದಿದೆ‌.

More News

You cannot copy content of this page