ಕೋಲ್ಕತ್ತಾ: ಬಾಲಿವುಡ್ ನ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
73 ವರ್ಷ ವಯಸ್ಸಿನ ಮಿಥುನ್ ಚಕ್ರವರ್ತಿ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಬ್ರೈನ್ ಸ್ಟ್ರೋಕ್ ಆಗಿದೆ ಎಂದು ಹೇಳಲಾಗಿತ್ತು. ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು.
ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಸಂಪೂರ್ಣವಾಗಿ ಜ್ಞಾನ ಹೊಂದಿದ್ದು, ಮೃದು ಆಹಾರ ಸೇವಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅವರನ್ನು ಇನ್ನು ಕೆಲವು ಪರೀಕ್ಷೆಗೆ ಒಳಪಡಿಸಬೇಕಾಗಿದೆ. ಆದ್ದರಿಂದ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಜನಪ್ರಿಯ ನಟ ಮಿಥುನ್ ಚಕ್ರವರ್ತಿ ಅವರು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೆ ಹಿಂದಿ, ಬೆಂಗಾಲಿ, ಒಡಿಯಾ, ಭೋಜ್ ಪುರಿ ಮತ್ತು ತಮಿಳು ಭಾಷೆಯಲ್ಲಿ ಸುಮಾರು 350ಕ್ಕೂ ಹೆಚ್ಚು ಚಲನಚಿತ್ರದಲ್ಲಿ ನಟಿಸಿದ್ದಾರೆ.