KAVERI RIVER WATER DISPUTE: ಕಾವೇರಿ ನದಿ ನೀರು ವಿವಾದ: ರಾಜ್ಯಕ್ಕೆ ತಪ್ಪದ ಸಂಕಷ್ಟ : ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸೂಚನೆ

ನವದೆಹಲಿ : ತೀವ್ರ ಮಳೆ ಕೊರತೆ ಮತ್ತು ಬರಗಾಲದಿಂದ ತತ್ತರಿಸಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ತಲಾ 2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಸೋಮವಾರ ದೆಹಲಿಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಲಾಗಿದ್ದು, ತಮಿಳುನಾಡು 7.61 ಟಿಎಂಸಿ ಬಾಕಿ ಇದ್ದು ಇದರ ಜತೆಗೆ ಫೆಬ್ರುವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡು ಸಭೆಯಲ್ಲಿ ಒತ್ತಾಯಿಸಿತು.
ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ 52,43 ರಷ್ಟು ಒಳಹರಿವಿನ ಕೊರತೆಯಿದೆ. ಹಾಗೆಯೇ ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ನೀರು ಹರಿಸಲು ಸಾಧ್ಯವಿಲ್ಲ ಎಂದು ಮನವರಿಕೆ ಮಾಡಿತು.
ಆದರೆ, ವಾದ ಪ್ರತಿವಾದ ಆಲಿಸಿದ ಸಮಿತಿ, ನ್ಯಾಯಾಧೀಕರಣದ ಸೂಚನೆಯಂತೆ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ತಲಾ 2.5 ಟಿಎಂಸಿ ನೀರು ಹರಿಸಲು ಶಿಫಾರಸ್ಸು ಮಾಡಿದೆ.

More News