Search

ACTRESS SUMALATHA AMBARISH IN ABU DUABI: ಅಬುಧಾಬಿಯ ಹಿಂದೂ ದೇಗುಲ ಉದ್ಘಾಟನೆಯಲ್ಲಿ ಪಾಲ್ಗೊಂಡ ಸಂಸದೆ ಸುಮಲತಾ ಅಂಬರೀಷ್

ಅಬುಧಾಬಿ : ಅಬುಧಾಬಿಯಲ್ಲಿ ನಿರ್ಮಾಣಗೊಂಡ ಮೊದಲ ಹಿಂದೂ ದೇಗುಲದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪಾಲ್ಗೊಂಡಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರುವರಿ 14 ರಂದು ಅಬುಧಾಬಿಯ ಹಿಂದೂ ದೇವಾಲಯವನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವೈಜ್ಞಾನಿಕ ಮತ್ತು ಪ್ರಾಚೀನ ವಾಸ್ತು ಶಿಲ್ಪ ಶೈಲಿಯನ್ನು ದೇಗುಲದಲ್ಲಿ ಅಳವಡಿಸಿಕೊಂಡು ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಫೋಟೋಗಳನ್ನು ಅಪ್ ಲೋಡ್ ಮಾಡಿದುರ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾದದ್ದು ನನ್ನ ಪುಣ್ಯ ಎಂದು ಹೇಳಿದ್ದಾರೆ.
ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್​ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS) ನಿರ್ಮಿಸಿರುವ ಬೃಹತ್​ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಆಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಾಗಿದೆ.

ವಸುದೈವ ಕುಟುಂಬಕಂ ಸಿದ್ಧಾಂತವನ್ನು ಯಾವಾಗಲೂ ಪ್ರತಿಪಾದಿಸುವ, ಜಗತ್ತೇ ಮೆಚ್ಚುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟಿಸಿ, ಅಬುಧಾಬಿಯಲ್ಲಿ ಆಡಿದ ಸ್ಪೂರ್ತಿದಾಯಕ ಮಾತುಗಳು ಯುಎಇ ಮತ್ತು ಭಾರತದ ನಡುವಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತರುವುದರಲ್ಲಿ ಎರಡು ಮಾತಿಲ್ಲ.ಇಂತಹ ಪ್ರಧಾನಿ ಪಡೆದಿರುವುದು ನಮ್ಮೆಲ್ಲರ ಪುಣ್ಯ.

ಅಬುಧಾಬಿಯ ನೆಲದಲ್ಲಿ ಬೃಹತ್ ಹಿಂದೂ ಮಂದಿರ ನಿರ್ಮಾಣ ಮತ್ತು ಉದ್ಘಾಟನೆಯಂತಹ ಐತಿಹಾಸಿಕ ಕ್ಷಣಕ್ಕೆ ಹಾಗೂ ಆ ದೈವಿಕ ಅನುಭವಕ್ಕೆ ಸಾಕ್ಷಿಯಾಗಲು ನನಗೆ ಅವಕಾಶ ಮಾಡಿಕೊಟ್ಟ BAPS ಸಂಸ್ಥೆಯ ಸರ್ವರಿಗೂ ಮನತುಂಬಿದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

More News

You cannot copy content of this page