ಬೆಂಗಳೂರು : ಕರ್ನಾಟಕ ರಾಜ್ಯದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಕುರಿತು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಸುತ್ತೋಲೆ ಹೊರಡಿಸಿದ್ದು, ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಪ್ರಾಂಶುಪಾಲರು, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಿದೆ.

ಆದರೆ ಆದೇಶದಲ್ಲಿ ನಿಗಧಿತ ರಾಷ್ಟ್ರೀಯ ಹಬ್ಬಗಳನ್ನು ಮತ್ತು ಜಯಂತಿಗಳನ್ನು ಆಚರಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಈ ಆದೇಶ ಖಾಸಗಿ ಶಾಲೆ ಮತ್ತು ಕಾಲೇಜುಗಳಿಗೆ ಈ ಸುತ್ತೋಲೆ ಅನ್ವಯವಾಗುವುದಿಲ್ಲ ಎನ್ನಲಾಗಿದೆ.

ಆದೇಶ ವಾಪಾಸ್ಸು
ಈ ಆದೇಶದಿಂದ ಆಗುವ ಸಮಸ್ಯೆ, ಟೀಕೆಗಳಿಗೆ ಕೂಡಲೇ ಎಚ್ಚೆತ್ತು ಕೊಂಡ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಆದೇಶವನ್ನು ವಾಪಾಸ್ ಪಡೆದುಕೊಂಡಿದೆ. ವಿರೋಧಗಳಿಗೆ ಎಚ್ಚೆತ್ತು ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಯುಗಾದಿ, ರಂಜಾನ್, ಕ್ರಿಸ್ಮಸ್, ಈದೇ ಮಿಲಾದ್, ಸಂಕ್ರಾಂತಿ ಮುಂತಾದ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿತ್ತು.