Residential Schools Slogan Change: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ : ಪ್ರಿಯಾಂಕ್ ಖರ್ಗೆ ಸಮರ್ಥನೆ

ಬೆಂಗಳೂರು : ರಾಜ್ಯದ ವಸತಿ ಶಾಲೆಗಳಲ್ಲಿ ಹಾಕಲಾಗಿದ್ದ ಹಳೆ ಘೋಷವಾಕ್ಯ ಬದಲಾವಣೆ ಮಾಡಿ ಹೊಸತಾಗಿ ಮಾಡಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿದ್ದಾರೆ.ಜ್ಞಾನ ದೇಗುಲವಿದು ಕೈ ಮುಗಿದು ಬಾ ಎಂಬ ಘೋಷಾವಾಖ್ಯದ ಬದಲಾಗಿ,ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಾವಣೆ ಮಾಡಲಾಗಿದೆ. ಆದರೆ ಇದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,ಸಾಮಾಜಿಕ ಸ್ಥಿತಿಗಳ ತಕ್ಕಂತೆ ಬದಲಾವಣೆ ಆಗಬೇಕು‌ ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದರಲ್ಲಿ ತಪ್ಪಿಲ್ಲ ಎಂದರು.

ಕೂತೂಹಲ ಇಲ್ಲ ಅಂದರೆ ‌ಕಲಿಕೆ ಬರಲ್ಲ. ಕಲಿಗೆ ಬರಲ್ಲ ಅಂದರೆ ಜ್ಞಾನ ಬರಲ್ಲ. ಸಮಾಜದಲ್ಲಿ ಪ್ರಬುದ್ಧತೆ ಇರುವುದಿಲ್ಲ. ಪ್ರಬುದ್ಧ ಭಾರತ, ಪ್ರಬುದ್ಧ ಸಮಾಜ ಕಟ್ಟಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದು ಬೆಳೆಯಬೇಕು ಅಂದ್ರೆ ಪ್ರಶ್ನೆ ಮಾಡಲೇಬೇಕು ಅಲ್ವಾ? ಎಂದು ಪ್ರಶ್ನಿಸಿದರು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಅದಕ್ಕೆ ಪ್ರಶ್ನೆ ಕೇಳುವುದು ಮುಖ್ಯ. ಎಲ್ಲದಕ್ಕೂ ಉತ್ತರ ಸಿಗಲ್ಲ, ಪ್ರಶ್ನೆ ಮಾಡಿದ್ರೆ ವೈಜ್ಞಾನಿಕ ಮನೋಭಾವ ಬೆಳೆಯುತ್ತೆ. ಶಿಕ್ಷಕರಿಗೆ ಹೊಸ ರೂಪದಲ್ಲಿ ಕಲಿಕೆ ಆಗುತ್ತದೆ ಎಂದರು.

ಹಿಂದೂ ಪರ ಸಂಘಟನೆಗಳು ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ನಾವೇನು ಬೇರೆ ವಿಚಾರ ಹೇಳಿಲ್ಲ. ಜ್ಞಾನಕ್ಕೆ ನಾವು ತೆಲೆ ಬಾಗಲೇಬೇಕು.
ಲೈಬ್ರರಿಗಳಿಗೆ ಅರಿವು ಕೇಂದ್ರ ಎಂದು ಹೆಸರು ಬದಲಾವಣೆ ‌ಮಾಡಿದ್ದೇವೆ.
ಅರಿವೇ ಗುರು ಅಂತ ಬಸವಣ್ಣ ಹೇಳಿದ್ದಾರೆ ಇದು ತಪ್ಪಾ? ಅರಿವು ಮೂಡಿಸಲು‌ ಏನು‌ ಮಾಡಬೇಕು ಅದನ್ನು ಸರ್ಕಾರ ಮಾಡುತ್ತಿದೆ ಎಂದರು.

ನಾಲೆಡ್ಜ್ ಬೇಸ್ ಸೊಸೈಟಿ ಕ್ರಿಯೆಟ್ ಮಾಡುತ್ತಿದ್ದೇವೆ. ವಿಶ್ವಗುರು ಆಗಬೇಕು ಅಂದ್ರೆ ನಾಲೆಡ್ಜ್ ಅಗ್ರಸ್ಥಾನ ನೀಡಬೇಕು. ಹಾಸ್ಟೆಲ್ ಗಳು ಎಲ್ಲ ವಸತಿ ಶಾಲೆಗಳು ಜ್ಞಾನ ಕೇಂದ್ರವಾಗಬೇಕು. ಆಗ ಪ್ರಬುದ್ಧ ಮತ್ತು ಸಮೃದ್ಧ ಭಾರತ ಕಟ್ಟಬಹುದು ಎಂದರು‌

More News

You cannot copy content of this page