ಬೆಂಗಳೂರು : ರಾಜ್ಯಸಭೆ ಚುನಾವಣೆ ಮಂಗಳವಾರ ನಡೆಯಲಿದ್ದು, ಪ್ರತಿ ಕ್ಷಣಕ್ಕೂ ಚುನಾವಣಾ ರಂಗ ಕಾವೇರುತ್ತಿದೆ. ಕರ್ನಾಟಕ ಕಲ್ಯಾಣ ಪ್ರಗತಿ ಪಕ್ಷದ ಶಾಸಕ ಜರ್ನಾರ್ಧನ ರೆಡ್ಡಿ ಅವರು ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಗೂ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು. ಜನಾರ್ಧನ್ ರೆಡ್ಡಿ ಅವರನ್ನು ಸ್ವತಂ ಡಿಸಿಎಂ ಡಿ ಕೆ ಶಿವಕುಮಾರ್ ಅವರೇ ಅವರ ಮನೆಗೆ ತೆರಳಿ ಸಿಎಂ ಮನೆಗೆ ಕರೆತಂದು ಮಾತುಕತೆ ನಡೆಸಿದರು.
ನಂತರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ನಾನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ, ಆನೆಗುಂದಿ ಉತ್ಸವಕ್ಕೆ ಆಹ್ವಾನ ನೀಡಲು ಹೋಗಿದ್ದೆ, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಎಲ್ಲರೂ ಮನವಿ ಮಾಡಿದ್ದಾರೆ, ಆದರೆ, ನಾನು ಇನ್ನು ಏನು ತೀರ್ಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಜನಾರ್ಧನ ರೆಡ್ಡಿ ಅವರು ತಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.