Pakistan Zindabad Sloghan: ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೊರರನ್ನು ಮೊದಲು ಒದ್ದು ಒಳಗೆ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

ಹುಬ್ಬಳ್ಳಿ: ಕರ್ನಾಟಕ ವಿಧಾನ ಸೌಧದೊಳಗೆ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.

ದೇಶದಲ್ಲಿ ಯಾವಾಗಲೆಲ್ಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ ಆಗುತ್ತಿದೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಜೋಶಿ ಅತ್ಯುಗ್ರವಾಗಿ ಖಂಡಿಸಿದ್ದಾರೆ. ಈ ಕೂಡಲೇ ರಾಜ್ಯ ಪೊಲೀಸ್ ಇಲಾಖೆ ಮಾತು ಗೃಹ ಇಲಾಖೆ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಏನು ಹೇಳ್ತಾರೆ? ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಾಮಾನ್ಯ ಸಂಗತಿಯಲ್ಲ. ದೇಶ ದ್ರೋಹಕ್ಕೆ ಕುಮ್ಮಕ್ಕು ಕೊಡುವ ರೀತಿ ನಡೆದುಕೊಳ್ಳುತ್ತಿದೆ. ಈ ಬಗ್ಗೆ ರಾಹುಲ್ ಗಾಂಧಿ ಏನು ಹೇಳುತ್ತಾರೆ ಸ್ಪಷ್ಟಪಡಿಸಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಗೆ, ಮುಖ್ಯಮಂತ್ರಿಗೆ ದೇಶ, ದೇಶಭಕ್ತಿ, ಭಾರತ ಮಾತೆ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಮೊದಲು ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ ಎಂದು ಸಚಿವ ಪ್ರಹ್ಲಾದ ಜೋಶಿ ಹರಿ ಹಾಯ್ದಿದ್ದಾರೆ.

More News

You cannot copy content of this page