Search

ALL THE BEST SECOND PUC STUDENTS: ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭ: 6,98,624 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

ಬೆಂಗಳೂರು : ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದ್ದು, ರಾಜ್ಯದಾದ್ಯಂತ 6,98,624 ವಿದ್ಯಾರ್ಥಿಗಳು 1,124 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದು, ಇನ್ನು ಉಳಿದ 20 ಅಂಕಗಳನ್ನು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತಿದೆ. ಪರೀಕ್ಷೆ ಬೆಳಗ್ಗೆ 10.30ರಿಂದ ಮಧ್ಯಾ 1.30ರವರೆಗೆ ನಡೆಯಲಿವೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರೀಙಕ್ಷಾ ಕೇಂದ್ರದ ಸುಮ್ಾರು 200 ಮೀಟರ್ ವ್ಯಾಪ್ತಿಯಲ್ಲಿ ನಿಷಏಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಹಾಗೆಯೇ ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿಗಳ್ನು ಬಂದ್ ಮಾಡಲು ಸೂಚಿಸಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಮತ್ತು ಮನೆಗೆ ವಾಪಾಸ್ಸು ಬರಲು ಉಚಿತ ಸರ್ಕಾರಿ ಬಸ್ ಸೇವೆಯನ್ನು ಕಲ್ಪಿಸಲಾಗಿದೆ. ತಮ್ಮ ಹಾಲ್ ಟಿಕೇಟ್ ಅನ್ನು ತೋರಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

More News

You cannot copy content of this page