ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಇರುವಾಗ ಇಂದಿನಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆ ಎಲ್ ಪಿಜಿ (LPG) ಸಿಲಿಂಡರ್ ಬೆಲೆಯನ್ನು 25 ರೂಪಾಯಿನಷ್ಟು ಹೆಚ್ಚಳ ಮಾಡಿವೆ.
14.2 ಕೆಜಿಯ ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ರೀತಿಯಲ್ಲಿ ಏರಿಳಿತವಾಗಿಲ್ಲ. ಆದರೆ, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ ಮಾತ್ರ ಜಾಸ್ತಿ ಮಾಡಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆಯಾಗಿವೆ ಎಂದು ತೈಲ ಕಂಪನಿಗಳು ಸ್ಪಷ್ಟಪಡಿಸಿವೆ.
ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ತೂಕದ ಸಿಲಿಂಡರ್ ದರವು 1,795 ರೂಪಾಯಿಗೆ ಏರಿಕೆ ಕಂಡಿದೆ. ಕೋಲ್ಕತ್ತಾದಲ್ಲಿ 1911, ಮುಂಬೈನಲ್ಲಿ 1749 ಹಾಗೂ ಚೆನ್ನೈನಲ್ಲಿ 1960 ರೂಪಾಯಿನಷ್ಟು ಏರಿಕೆ ಕಂಡಿದೆ.