EXPLOSION IN RAMESHWARAM CAFE: ರಾಮೇಶ್ವರ ಕೆಫೆಯಲ್ಲಿ ಸ್ಫೋಟ: ನಾಲ್ವರು ಗಂಭೀರ ಗಾಯ

ಬೆಂಗಳೂರು : ಬೆಂಗಳೂರಿನ ಎಚ್ ಎಎಲ್ ನಲ್ಲಿರುವ ರಾಮೇಶ್ವರ ಕೆಫೆಯ ಅಡುಗೆ ಮನೆಯಲ್ಲಿ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ ಮೂವರು ಹೋಟೆಲ್ ಸಿಬ್ಬಂದಿಯಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಪೊಲೀಸರು, ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಶುಕ್ರವಾರ ಮಧ್ಯಾಹ್ನ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಊಟ ಮಾಡುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ.
ಆದರೆ, ಘಟನಾ ಸ್ಥಳದಲ್ಲಿ ಯಾವುದೇ ಸಿಲಿಂಡರ್ ಸ್ಫೋಟದ ಬಗ್ಗೆ ಮಾಹಿತಿ ಸಿಗಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ಘಟನೆ ಕಾರಣ ಏನೆಂದು ತನಿಖೆ ನಡೆಸುತ್ತಿದ್ದಾರೆ.

More News