FORMER CRICKTER GAUTAM GAMBHIR QUITTING POLITICS: ಲೋಕಸಭೆ ಚುನಾವಣೆಗೂ ಮುನ್ನಾ ಸಂಸದ ಗೌತಮ್ ಗಂಭೀರ್ ಬಿಜೆಪಿ ಮತ್ತು ರಾಜಕೀಯಕ್ಕೆ ವಿದಾಯ..!

ನವದೆಹಲಿ : ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಬಿಜೆಪಿ ವರಿಷ್ಠರಿಗೆ ಶಾಕ್ ನೀಡಿದ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್. ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಬಿಡುಗಡೆಗೊಳಿಸಿ ಎಂದು ಕೋರಿ ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ದೆಹಲಿ ಪೂರ್ವ ಸಂಸದರಾಗಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಧನ್ಯವಾದಗಳನ್ನು ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕ್ರಿಕೆಟ್ ಸಂಬಂಧಿತ ಜವಾಬ್ದಾರಿಗಳತ್ತ ಗಮನ ಹರಿಸಬೇಕಾಗಿರುವುದರಿಂದ ನನ್ನನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಹಾಗೆಯೇ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.
ಪ್ರಸ್ತುತ ಅವರು ಕೆಕೆಆರ್ ತಂಡದ ಮೆಂಟರ್ ಆಗಿ ನೇಮಕಗೊಂಡಿದ್ದಾರೆ. ಹಾಗೆಯೇ ಅವರು ಈ ಹಿಂದೆ ಕೋಲ್ಕತ್ತ ನೈಟ್ ರೈಡರ್ಸ್ ತಂಡವು 2012 ಮತ್ತು 2014 ರಲ್ಲಿ ಚಾಂಪಿಯನ್ ಆಗುವಲ್ಲಿ ತಂಡದ ನಾಯಕರಾಗಿ ಪ್ರಮುಖ ಸ್ಥಾನ ವಹಿಸಿದ್ದರು.
ಟೀ ಇಂಡಿಯಾ ಪರ 147 ಏಕದಿನ, 58 ಟೆಸ್ಟ್ ಹಾಗೂ 37 ಟಿ20 ಪಂದ್ಯಗಳನ್ನು ಗೌತಮ್ ಗಂಭೀರ್ ಆಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡ 2007ರಲ್ಲಿ ಟಿ20 ಹಾಗೂ 2011 ರಲ್ಲಿ ಏಕದಿನ ವಿಶ್ವಕಪ್ ಗೆಲ್ಲಲು ಪ್ರಮುಖ ಪಾತ್ರವಹಿಸಿದ್ದರು.

More News

You cannot copy content of this page