ನವದೆಹಲಿ : ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೆ ಆಡಳಿತರೂಢ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ನವದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ನಾಟಕರುಗಳ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ ಹೆಸರು ಪ್ರಧಾನಿ ನರೇಂದ್ರ ಮೋದಿಯವರಿದ್ದು, ಅವರು ವಾರಣಾಸಿಯಿಂದ ಮತ್ತೆ ಸ್ಪರ್ಧಿಸಲಿದ್ದಾರೆ.

ಹಾಗೆಯೇ ಮೊದಲ ಪಟ್ಟಿಯಲ್ಲಿ 28 ಮಹಿಳೆಯರಿಗೆ, 34 ಕೇಂದ್ರ ಸಚಿವರಿಗೆ ಟಿಕೆಟ್ ಲಭಿಸಿದೆ. 47 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದ್ದು, ಇಬ್ಬರು ಮಾಜಿ ಸಿಎಂ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಸಿರು ನಿಶಾನೆ ತೋರಿಸಿದೆ.

ಗುಜರಾತ್ ನ ಗಾಂಧಿನಗರದಿಂದ ಗೃಹ ಸಚಿವ ಅಮಿತ್ ಷಾ, ರಾಜನಾಥ್ ಸಿಂಗ್ ಲಖನೌದಿಂದ ಸ್ಪರ್ಧಿಸಲಿದ್ದು, ಪಟ್ಟಿ ಕರ್ನಾಟಕದ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ, ಆದರೆ, ುತ್ತರಪ್ರದೇಶದಲ್ಲಿ ಬರೋಬ್ಬರಿ 51 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವುದನ್ನು ಗಮನಿಸಿದರೆ, ಮಂದಿನ ವಾರ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಗಳು ಹೆಚ್ಚಾಗಿವೆ.