MINISTER PRIYANK KHARGE HEAD OF FAKE NEWS FACTORY: ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆಯವರು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕರಿಸಿ ಕನ್ನಡಿಗರ ಕ್ಷಮೆ ಕೇಳಬೇಕು: ಬಿಜೆಪಿ

ಬೆಂಗಳೂರು : ರಾಜ್ಯಸಭೆ ಮತದಾನದ ವೇಳೆ ವಿಧಾನಸೌಧದಲ್ಲಿ ನಡೆದ ಅಹಿತಕರ ಘಟನೆಯೇ ಇದೀಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಸಮರಕ್ಕೆ ಕಾರಣವಾಗಿದೆ. ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಜೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಬಿಜೆಪಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದೆ.
ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಆಗ್ರಹಿಸಿದೆ.

ಟ್ವೀಟ್ ನ ಸಂಪೂರ್ಣ ವಿವರ ಇಲ್ಲಿದೆ. ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಜೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.
ರಾಷ್ಟ್ರ ವಿರೋಧಿ ಧೋರಣೆಯ @INCKarnataka ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.

More News

You cannot copy content of this page