ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸೋಮವಾರ ಯಾರೂ ಊಹಿಸದ ಪೈಶಾಚಿಕ ,ಘಟನೆಯೊಂದು ನಡೆದಿದೆ. ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿದ್ದಾನೆ.

ಕಿರಾತಕ ಯುವಕನೋರ್ವ ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಪಕ್ಕದಲ್ಲಿಯೇ ಆ್ಯಸಿಡ್ ದಾಳಿ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಅಲ್ಲಿಂದವರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯ ಮೇಲೆ ಎರಚಿದ ಆ್ಯಸಿಡ್ ಪಕ್ಕದಲ್ಲಿಯೇ ಕುಳಿತಿದ್ದ ಇನ್ನಿಬ್ಬರು ಯುವತಿಯರ ಮೇಲೆ ಬಿದ್ದಿದೆ. ಅವರೂ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಯುವಕ ಮತ್ತು ದಾಳಿಗೊಳಗಾದ ಯುವತಿ ಇಬ್ಬರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಯುವಕ ಕೇರಳಾ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ, ಮತ್ತಷ್ಟು ಮಾಹಿತಿ ಅಪ್ ಡೇಟ್ ಗಾಗಿ ಕಾಯಲಾಗುತ್ತಿದೆ.