ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ವಿಧಾನಸಭಾ ಕ್ಷೇತ್ರವಾರು ಅನುಷ್ಠಾನ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರಾಗಿ ಜಿ. ಕೃಷ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳಾಗಿ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಕೆ ಜೆ ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್ ಅವರನ್ನು ನೇಮಕ ಮಾಡಲಾಗಿದೆ.

ಮಲ್ಲೇಶ್ವರ ಕ್ಷೇತ್ರಕ್ಕೆ ಪರಾಜಿತ ಅಭ್ಯರ್ಥಿ ಅನೂಪ್ ಐಯ್ಯಂಗಾರ್, ಬಿಟಿಎಂ ಲೇಔಟ್ ಕ್ಷೇತ್ರಕ್ಕೆ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಜಯನಗರಕ್ಕೆ ಮಾಜಿ ಕಾರ್ಪೊರೇಟರ್ ಎನ್. ನಾಗರಾಜು ಅವರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.