INFOSYS SUDHA MURTHY NOMINATED FOR RAJYA SABHA: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ : ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಸಂತಸ ಹಂಚಿಕೊಂಡಿದ್ದಾರೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದೆ ಈ ಘೋಷಣೆಯಾಗಿದ್ದು ಅನೇಕರಿಗೆ ಸಂತಸ ತಂದಿದೆ.

ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿಯವರು ನಾಮನಿರ್ದೇಶನ ಮಾಡಿರುವುದು ನನಗೆ ಸಂತಸವಾಗಿದೆ, ಸಮಾಜಸೇವೆ, ಶಿಕ್ಷಣ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಸುಧಾಮೂರ್ತಿ ಅವರ ಕೊಡುಗೆ ಅಪಾರ ಮತ್ತು ಅನೇಕರಿಗೆ ಸ್ಪೂರ್ತಿದಾಯಕ.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಬಲ ಬಂದಂತಾಗಿದೆ. ಇದು ನಮ್ಮ ರಾಷ್ಟ್ರದ ಭವಿಶ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾರ್ಮಥ್ಯವನ್ನು ದೃಢೀಕರಿಸುತ್ತದೆ ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿಯವರು ಶುಭ ಹಾರೈಸಿದ್ದಾರೆ.

More News

You cannot copy content of this page