ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆ ದಿನೇ ದಿನೇ ಕಾವೇರುತ್ತಿದ್ದು, ಕಾಂಗ್ರೆಸ್ ಪಕ್ಷವು ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಒಟ್ಟು 39 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಇಂದು ಪ್ರಕಟಿಸಿದೆ.

ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡ್ ನಿಂದ ಸ್ಪರ್ಧಿಸಲಿದ್ದು, ಕೆ ಸಿ ವೇಣುಗೋಪಾಲ್ ಕೇರಳದ ಅಲಪ್ಪುಳದಿಂದ ಸ್ಪರ್ಧಿಸುತ್ತಿದ್ದಾರೆ. ಶಶಿ ತರೂರ್ ಕೇರಳದ ತಿರುವಂತನಾಥಪುರಂನಿಂದ, ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಫೇಸ್ ಬಘಲ್ ಅವರು ರಾಜನಾಂದಗಾಂವ್ ನಿಂದ ಕಣಕ್ಕಿಳಿಯಲಿದ್ದಾರೆ.
ಅದೇ ರೀತಿಯಲ್ಲಿ ಕರ್ನಾಟಕದ ಏಳು ಕ್ಷೇತ್ರಗದಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಬೆಂಗಳೂರು ಗ್ರಾಮಾಂತರದಿಂದ ಹಾಲಿ ಸಂಸದ ಡಿ ಕೆ ಸುರೇಶ್, ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ(ಸ್ಟಾರ್ ಚಂದ್ರು), ತುಮಕೂರಿನಿಂದ ಮುದ್ದಹನುಮೇಗೌಡ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್, ವಿಜಯಪುರದಿಂದ ಎಸ್ ಆರ್ ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದಮಠ ಇವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿ ಪಟ್ಟಿ ಪ್ರಕಟಿಸಿದೆ.

ಸಾಮಾಜಿಕ ನ್ಯಾಯದಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಕ್ಕೆ 24 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ತೆಲಂಗಾಣದ ನಾಲ್ಕು, ಛತ್ತೀಸಗಢದ 6, ಮೇಘಾಲಯ 2, ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಾ ತಲಾ 1 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ.