LPG CYLINDER RATE 100 RS REDUCED: LPG ಸಿಲಿಂಡರ್ ಬೆರೆ 100 ರೂಪಾಯಿ ಕಡಿತಗೊಳಿಸಿ ಆದೇಶ ಮಾಡಿರುವುದಾಗಿ ಪ್ರಧಾನಿ ಮೋದಿ

ನವದೆಹಲಿ : ಇಂದು ವಿಶ್ವದಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ಎಲ್ ಪಿಜಿ ಸಿಲಿಂಡರ್ ದರವನ್ನು 100 ಕಡಿತಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ತಿಳಿಸಿದ ್ವರು, ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬದ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ನಮ್ಮ ನಾರಿ ಶಕ್ತಿ ಪ್ರಯೋಜನವನ್ನು ನೀಡುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಆದರೆ, ಅದೇ ಸಿಲಿಂಡರ್ ಬೆಲೆ ಜಾಸ್ತಿಯಾದಾಗ ಮಾತೇ ಬಿಡದ ಪ್ರಧಾನಿ ಅವರು ಇದೀಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೂರು ಕಡಿತಗೊಳಿಸಿರುವುದನ್ನು ತಾವೇ ಮುಂದೆ ಬಂದು ಘೋಷಣೆ ಮಾಡಿರುವುದು ಜನಸಾಮಾನ್ಯರ ಟೀಕೆಗೆ ಗುರಿಯಾಗಿದೆ. ಬೆಲೆ ಏರಿಕೆಯಾದಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಬೆಲೆ ಜಾಸ್ತಿಯಾಗಿದೆ. ತೈಲ ನಿಗಮದ ಸ್ವಾಮ್ಯದ ಸಂಸ್ಥೆಗಳು ಜಾಸ್ತಿ ಮಾಡಿವೆ ಎಂದು ಹೇಳಿ ಅವರು ಕೈತೊಳೆದುಕೊಳ್ಳುತ್ತಿದ್ದರು. ಇದೀಗ ಅವರೇ ನೂರು ರೂಪಾಯಿ ಕಡಿತವನ್ನು ಘೋಷಣೆ ಮಾಡಿರುವುದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಡಿದ್ದಾರೆ ಎನ್ನುತ್ತಿದ್ದಾರೆ.
ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸುಲಭ ಬುದುಕು ಖಾತ್ರಿ ಪಡಿಸುವ ನಮ್ಮ ಬದ್ದತೆಗೆ ಅನುಗುಣವಾಗಿದೆ ಎಂದು ತಿಳಿಸಿದ ಅವರು, ಅಡುಗೆ ಅನಿಲವನ್ನು ಕೈಗೆಟುಕುವಂತೆ ಮಾಡುವ ಮೂಲಕ ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಿ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದ್ದೇವೆ ಎಂದಿದ್ದಾರೆ.

More News

You cannot copy content of this page