ಬೆಂಗಳೂರು : ರಾಜ್ಯದ ಎಲ್ಲಾ ಉರ್ದು ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರಸಕ್ತ ಸಾಲಿನ ವೇಳಾಪಟ್ಟಿಯನ್ನು ರಂಜನ್ ಹಬ್ಬದ ಸಲುವಾಗಿ ಬದಲಾವಣೆ ಮಾಡಿ, ರಾಜ್ಯ ಉರ್ದು ಮತ್ತು ಿತೆರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಆದೇಶ ಹೊರಡಿಸಿದೆ.

ಈ ಶಾಲಾ ಸಮಯ ಬದಲಾವಣೆ ಕೇವಲ ರಂಜಾನ್ ಹಬ್ಬದ ಸಂದರ್ಭದಲ್ಲಿ ಮಾತ್ರ ಜಾರಿಯಲ್ಲಿರುತ್ತದೆ, ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸ್ಚ್ಯಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಜಾರಿ ಮಾಡಿದೆ ಎಂದು ಇಲಾಖೆ ತಿಳಿಸಿದೆ.
ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾಪಟ್ಟಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ಇತ್ತು. ಇದನ್ನು ರಂಜಾನ್ ಹಬ್ಬದ ಸಂದರ್ಭದಲ್ಲಿ ಮಾತ್ರ ಬೆಳಿಗ್ಗೆ 8 ಗಂಚೆಯಿಂದ ಮಧ್ಯಾಹ್ನ 12.45ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದೆ.
ಆದರೆ, ಸಂಕಲನಾತ್ಮಕ ಮೌಲ್ಯಾಂಕ 5ನೇ, 8ನೇ ಮತ್ತು 9 ನೇ ತರಗತಿಯ ಪರೀಕ್ಷಾ ಕಾರ್ಯ ವೇಳಾಪಟ್ಟಿಯಂತೆ ನಡೆಯಲಿದೆ. ಹಾಗೆಯೇ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ತಿಳಿಸಿದೆ.