ಬೆಂಗಳೂರು, ಮಾರ್ಚ್ 08: ಇಸ್ರೋ ಸೆಟಿಲೈಟ್ ಇಂಟಿಗ್ರೇಷನ್ ಟೆಸ್ಟ್ ಎಸ್ಟಾಬ್ಲಿಷ್ ಮೆಂಟ್ ( ISRO Sattelite Integration Test Establishments (ISITE) ) ಭೇಟಿ ನೀಡುವ ಸಲುವಾಗಿ ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಅವರು ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದರು.


ಗೌರವಾನ್ವಿತ ಉಪ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.



ಈ ಸಮಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಅಮ್ಲನ್ ಆದಿತ್ಯ ಬಿಸ್ವಾಸ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ.ದಯಾನಂದ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ ದಯಾನಂದ, ರಕ್ಷಣಾ ಇಲಾಖೆಯ ಅಧಿಕಾರಿಗಳು ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
