ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ಟಿಕೆಟ್ ಹಂಚಿಕೆ ಸರ್ಕಸ್ ಜೋರಾಗಿದ್ದು, ಇದೀಗ ಬಿಜೆಪಿಯ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಅವರ ಸರದಿ. ಪುತ್ರನಿಗೆ ಹಾವೇರಿ ಲೋಕಸಭೆ ಟಿಕೇಟೆ ಪಡೆಯಲು ಸಾಕಷ್ಟು ಸರ್ಕಸ್ ಮಾಡಿದ್ದರು.
ಆದರೆ ಇದೀಗ ಪುತ್ರ ಕಾಂತೇಶ್ ಗೆ ಟಿಕೇಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇದರಿಂದ ರೊಚ್ಚಿಗೆದ್ದ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರ ವಿರುದ್ಧವೇ ಕಣಕ್ಕಿಳಿಯಲು ಚಿಂತನೆ ನಡೆಸಲಾಗಿದೆಯಂತೆ.
ಬಿಜೆಪಿ ಹೈಕಮಾಂಡ್ ಹಾವೇರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಿಲ್ಲಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡು, ಪಕ್ಷೇತರರಾಗಿ ಶಿವಮೊಗ್ಗದಿಂ ಕಣಕ್ಕಿಳಿಯುಲವ ಸಾಧ್ಯೆತೆಗಳು ಹೆಚ್ಚಾಗಿವೆ.
ಇದರಿಂದ ರಾಘವೇಂದ್ರ ವಿರುದ್ಧ ತೊಡೆ ತಟ್ಟಲು ಮುಂದಾಗಿರುವ ಈಶ್ವರಪ್ಪ ತಮ್ಮ ರಾಷ್ಟ್ರ ಭಕ್ತರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಸಂಘಟನೆಯೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.