Search

TELANGANA GOVERNOR RESIGNS: ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ತಮ್ಮ ಸ್ಥಾನಕ್ಕೆ ರಾಜಿನಾಮೆ

ಹೈದರಾಬಾದ್ : ತೆಲಂಗಾಣ ರಾಜ್ಯದ ರಾಜ್ಯಪಾಲರಾಗಿದ್ದ ತಮಿಳಿಸೈ ಸೌಂದರ್ಯರಾಜನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ತಿಳಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸೌಂದರ್ಯರಾಜನ್ ಅವರು ಸಲ್ಲಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೂಲಗಳು ತಿಳಿಸಿದ್ದು, ಸೌಂದರ್ಯರಾಜನ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ತಮಿಳುನಾಡಿನ ತೂತುಕುಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಡಿಎಂಕೆಯ ಕನಿಮೋಳಿ ವಿರುದ್ಧ ಸೋಲು ಕಂಡಿದ್ದರು. ನಂತರ ಅವರನ್ನು ರಾಜ್ಯಪಾಲರಾಗಿ ಆಯ್ಕೆ ಮಾಡಲಾಗಿತ್ತು.

More News

You cannot copy content of this page