Search

ALL CLEAR K L RAHUL WILL PLAY IPL: ಫಿಟ್ ನೆಸ್ ಪ್ರಮಾಣಪತ್ರ ಪಡೆದು ಐಪಿಎಲ್ ಗೆ ಸಜ್ಜಾಗುತ್ತಿರುವ ಕ್ರಿಕೆಟಿಗ ಕೆ ಎಲ್ ರಾಹುಲ್

ನವದೆಹಲಿ : ಇನ್ನೇನು ಕೆಲವೇ ದಿನಗಳಲ್ಲಿ ಐಪಿಎಲ್ ಸೀಸನ್ 17 ಆರಂಭವಾಗಲಿದೆ. ಇದಕ್ಕೆ ಎಲ್ಲಾ ತಂಡದ ಆಟಗಾರರು ಸಜ್ಜಾಗುತ್ತಿದ್ದು, ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಹಾಗೆಯೇ ಕನ್ನಡಿಗ ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ ಎಲ್ ರಾಹುಲ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(NCA) ಯಿಂದ ಫಿಟ್ ನೆಸ್ ಪ್ರಮಾಣಪತ್ರವನ್ನು ಪಡೆದಿದ್ದಾರೆ.

ಆದರೆ, ಐಪಿಎಲ್ ಟೂರ್ನಿಯ ಆರಂಭಿಕ ಕೆಲವು ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ಮಾಡದಂತೆ ಅವರಿಗೆ ಎನ್ ಸಿಎ ಸಲಹೆ ನೀಡಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಅವರು ಎನ್ ಸಿಎನಲ್ಲಿ ಬ್ಯಾಟಿಂಗ್, ಕೀಪಿಂಗ್ ಮತ್ತು ಔಟ್ ಫೀಲ್ಡಿಂಗ್ ಅಭ್ಯಾಸ ಮಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಚ್ ಮಾಡಿದ್ದಾರೆ. ನಾನು ಕೂಡ ಐಪಿಎಲ್ ಟೂರ್ನಿಗೆ ಸಜ್ಜಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಹೈದರಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ರಾಹುಲ್ ನಂತರ ಗಾಯದ ಸಮಸ್ಯೆಯಿಂದ ಟೂರ್ನಿಯಲ್ಲಿ ಆಡಿರಲಿಲ್ಲ. ಅತೀ ಶೀಘ್ರದಲ್ಲಿ ಕೆ ಎಲ್ ರಾಹುಲ್ ಅವರು ಲಖನೌ ಜೈಂಟ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

More News

You cannot copy content of this page