ವಿಜಯಪುರ : ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೋಟಿಯ 93 ಲಕ್ಷದ 50 ಸಾವಿರ ರೂಪಾಯಿ ಹಣವನ್ನು ವಿಜಯಪುರ ಪೊಲೀಸರು ಸೋಮವಾರ ರಾತ್ರಿ ವಶವಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ನೋಂದಣಿ ಇರುವ ಟೋಯೋಟಾ ಕಾರಿನಲ್ಲಿ ಸಾಂಗಲಿಯ ಬಾಲಾಜಿ ನಿಕ್ಕಂ ಮತ್ತು ಸಚಿನ್ ಮೋಹಿತೆ ಎಂಬುವರು ಹಣ ಸಾಗಿಸುತ್ತಿದ್ದರು. ಹಣವನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ವಿಜಯಪುರ ಸಿಇಎನ್ ಪೊಲೀಸ್ ಠಾಣೆ ಪೊಲೀಸರು ಸಿಂದಗಿ ಬೈಪಾಸ್ ನಲ್ಲಿ ಕಾರನ್ನು ಅಡ್ಡಗಟ್ಟಿದಾಗ ನಗದು ಪತ್ತೆಯಾಗಿದೆ.
ಪೊಲೀಸರು ತಪಾಸಣೆ ನಡೆಸಿದ ಸಂದರ್ಭದಲ್ಲಿ ಸೂಕ್ತ ರೀತಿಯ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಹಣವನ್ನು ವಶಪಡಿಸಿಕೊಂಡು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.