NAGARTHPET ROIT CASE: ಬೆಂಗಳೂರು ನಗರ್ತಪೇಟೆ ಗಲಾಟೆ ಪ್ರಕರಣ: ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು : ನಗರದ ನಗರ್ತಪೇಟೆಯಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಹಲ್ಲೆಗೆ ಒಳಗಾಗಿದ್ದ ಮುಖೇಶ್ ಎಂಬಾತನನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯಲು ಮುಂದಾದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆಯಿತು.

ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ ನಗರತ್ ಪೇಟೆಯಲ್ಲಿ ಉದ್ವಿಗ್ನ ವಾತಾವರಣ ನೆಲೆಸಿತ್ತು. ನೀತಿ ಸಂಹಿತೆ ಜಾರಿಯಾಗಿದೆ ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿದರು, ಆದರೂ ಕೂಡ ಬಿಜೆಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳದಲ್ಲಿ ನೆರೆದಿದ್ದ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮವನ್ನು ಖಂಡಿಸಿದರು. ಹಾಗೂ ಪೊಲೀಸರ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಂಗಡಿಗಳನ್ನು ಬಂದ್ ಮಾಡಿಸಲಾಗಿತ್ತು.
ಸರ್ಕಾರದ ವೈಫಲ್ಯವನ್ನು ಖಂಡಿಸಿದ ಶೋಭಾ, ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು. ನಂತರ ಪೊಲೀಸರು ಶೋಭಾ ಅವರನ್ನು ವಶಕ್ಕೆ ಪಡೆದರು.

ಇದು ಯಾವುದೇ ರೀತಿಯಲ್ಲಿ ಹನುಮಾನ್ ಚಾಲೀಸ್ ಪಠಿಸುತ್ತಿದ್ದಾಗ ನಡೆದ ಹಲ್ಲೆಯಾಗಿದೆ ಎನ್ನುವುದು ಸುಳ್ಳು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

More News

You cannot copy content of this page