ಮೈಸೂರು : ಮೈಸೂರು – ಕೊಡಗು ಕೋಲಸಭಾ ಕ್ಷೇತ್ದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಗಿ ಯಾರು ರಾಜ ಎಂದು ಪ್ರಶ್ನಿಸಿದ್ದನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ, ಮುಖ್ಯಮಂತ್ರಿ ಅವರ ಹೇಳಿಕೆಯಲ್ಲಿ ಹುಳುಕು ಹುಡುಕುವುದು ತಪ್ಪು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೈದ್ದಾಂತಿಕವಾಗಿ ನಾನು ವಿರೋಧಿಸುತ್ತೇನೆ. ಆದರೆ ಯುದುವೀರ್ ಬಗ್ಗೆ ನೀಡಿರುವ ಹೇಳಿಕೆಯಲ್ಲಿ ಸಂಪೂರ್ಣ ಸಹಮತ ಇದೆ ಎಂದು ಸ್ಪಷ್ಟಪಡಿಸಿದರಲ್ಲದೆ, ದೇಶದಲ್ಲಿ ಈಗ ರಾಜಾಡಳಿತವಿಲ್ಲ, ಆದ್ದರಿಂದ ಸಿಎಂ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದರು.
ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ಕೈ ತಪ್ಪಿದ ನಂತರ ಮುನಿಸಿಕೊಂಡಿದ್ದರು. ನಂತರ ಅವರ ಮುನಿಸಿಗೆ ತೇಪೆ ಹಚ್ಚುವಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಯದುವೀರ್ ಪರ ಪ್ರಚಾರದಲ್ಲಿ ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಕುರಿತಾದ ಹೇಳಿಕೆ ಸಂಬಂಧ ಯುದುವೀರ್ ಪ್ರತಿಕ್ರಯಿಸಿದ್ದು, ಸಿಎಂ ಅವರು ಹೇಳಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ, ದೇಶದ ಸಂವಿಧಾನದಲ್ಲಿ ರಾಜ, ರಾಣಿ, ಪಟ್ಟಕ್ಕೆ ಹೆಚ್ಚು ಮಹತ್ವವಿಲ್ಲ, ಪ್ರಜಾಪ್ರಭುತ್ವದಲ್ಲಿ ಎಲ್ಲಾರೂ ಪ್ರಜೆಗಳೇ ಎಂದು ಹೇಳಿದ್ದಾರೆ.




