CONGRESS MEETING : ಚುನಾವಣಾ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತು ಉಸ್ತುವಾರಿ ಸಚಿವರ ಮಹತ್ವದ ಸಭೆ

ಬೆಂಗಳೂರು : ಲೋಕಸಭಾ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸುವ ಉದ್ದೇಶದಿಂಂದ ಇಂದು‌ ಸಂಜೆ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಉಸ್ತುವಾರಿ ಸಚಿವರ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಕರೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಚುನಾವಣೆಯನ್ನು ಯಾವ ರೀತಿಯಲ್ಲಿ ಎದುರಿಸಿ ಗೆಲ್ಲುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾವಣಾ ಹೊಣೆಗಾರಿಕೆ ನೀಡಲಾಗಿದ್ದು, ಕ್ಷೇತ್ರ ಗೆಲ್ಲುವ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡಲು ಸಭೆ ಕರೆಯಲಾಗಿದೆ. 20ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎಂಬ ಟಾರ್ಗೆಟ್ ಹೊಂದಿರುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಮಹತ್ವದ ಸಭೆ ನಡೆಸಲಿದೆ.
ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ವಿಶ್ವಾಸಕ್ಕೆ ಪಡೆಯಲು ಸೂಚನೆ ನೀಡಲಾಗುವುದು ಎಂದು ತಿಳಿದುಬಂದಿದೆ.

More News

You cannot copy content of this page