ಬೆಂಗಳೂರು : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಫ್ಯಾಮಿಲಿ ಪಾಲಿಟಿಕ್ಸ್ ನಡೆಯುತ್ತಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್, ಇದು ನನ್ನ ನಿರ್ಧಾರವಲ್ಲ, ನಮ್ಮ ನಾಯಕರು ತೆಗೆದುಕೊಂಡ ನಿರ್ಧಾರವಾಗಿದೆ, ಸಚಿವ ಸತೀಶ್ ಜಾರಕಿಹೊಳ ಎಲ್ಲರು ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಸಮಾಜಾಯಿಸಿ ನೀಡಿದರು.
ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಪುತ್ರ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮೃಣಾಲ್ ಹೆಬ್ಬಾಳ್ಕರ್ ಅವರೊಂದಿಗೆ ಭೇಟಿ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ ಕಾರ್ಯಕರ್ತರು ತೆಗೆದುಕೊಂಡ ನಿರ್ಧಾರವಾಗಿದೆ ಎಂದರು.

ಟಿಕೆಟ್ ಇನ್ನೂ ಅಪಿಶಿಯಲ್ ಆಗಿ ಅನೌನ್ಸ್ ಆಗಬೇಕಾಗಿದೆ. ಕ್ಷೇತ್ರದಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ, ನಾನು ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ನಮ್ಮ ಸರ್ಕಾರದ ಗ್ಯಾರೆಂಟಿಗಳು ನಮಗೆ ಅನುಕೂಲವಾಗಲಿದೆ, ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದರು.