Tired of Family Politics I Resigned: ಕುಟುಂಬ ರಾಜಕಾರಣಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದೇನೆ: ಮರಿತಿಬ್ಬೇಗೌಡ..!

ಹುಬ್ಬಳ್ಳಿ: ನಾನು ಸ್ವಇಚ್ಛೆಯಿಂದ ವೈಯಕ್ತಿಕ ಕಾರಣಕ್ಕೆ ರಾಜಿನಾಮೆ ನೀಡಿದ್ದೆನೆ. ಪಕ್ಷದಲ್ಲಿ ನಿಷ್ಠಾವಂತ ಶಾಸಕನಾಗಿ ಕೆಲಸ ಮಾಡಿದ್ದೆನೆ. ಶಿಕ್ಷಕ ಸಮುದಾಯ ಹಿತವನ್ನು ನಾಲ್ಕು ಬಾರಿ ಆರಿಸಿ ಬಂದು ಕಾಪಾಡಿದ್ದೆನೆ. ಕುಮಾರಸ್ವಾಮಿಯವರು ನಮ್ಮಲ್ಲಿ ಭಿನ್ನಾಭಿಪ್ರಾಯ ತಂದು ನಮ್ಮನ್ನು ಕಡೆಗಣೆ ಮಾಡಿದರು ಎಂದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ ಹೇಳಿದರು.

ರಾಜೀನಾಮೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಭಿನ್ನಾಭಿಪ್ರಾಯಗಳ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದೆ ಆದರೆ ಅದು ಅವರಿಗೆ ಇಷ್ಟವಾಗಲಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಅವರನ್ನು ಅಭ್ಯರ್ಥಿ ಬೇಡ ಮಂಡ್ಯ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಹೇಳಿದ್ದೆ. ಇದು ನಮ್ಮ ನಾಯಕರಿಗೆ ಇಷ್ಟವಾಗಿಲ್ಲ. ನನ್ನ ಮೇಲೆ ಸಂಶಯಾಸ್ಪದ ದೃಷ್ಟಿಯಿಂದ ಪಕ್ಷದ ವರಿಷ್ಠರು ನೋಡುತ್ತಿದ್ದರು.ಪಕ್ಷದ ಸಂಘಟನೆಗೂ ನನ್ನನ್ನು ಪರಿಣಿಗಿಸಿಲ್ಲ. ನನ್ನ ಕ್ಷೇತ್ರದ ಶಿಕ್ಷಕ ಮತದಾರ ಅಭಿಪ್ರಾಯದಂತೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆನೆ ಎಂದರು.

ಇನ್ನೂ ಕೆಲವೇ ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಈಗಾಗಲೇ ರಾಜಿನಾಮೆ ನೀಡಿದ್ದೆನೆ. ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಮ್ಮ ನಾಯಕರು ಮೊಸಳೆ ಮೇಲೆ ಸವಾರಿ ಮಾಡುತ್ತಿದ್ದಾರೆ. ಇದು ಬಹಳಷ್ಟು ಅಪಾಯಕಾರಿ. ಮೊಸಳೆ ಅಂದರೆ ಬಿಜೆಪಿ ಎಂದು ಅವರು ಕಿಡಿ‌ಕಾರಿದರು.

ಕುಮಾರಸ್ವಾಮಿ, ದೇವೆಗೌಡ, ರೇವಣ್ಣ ಮಾತ್ರ ಪಕ್ಷದ ಬಗ್ಗೆ ನಿರ್ಧಾರ ಮಾಡುತ್ತಾರೆ. ಸಾಮಾನ್ಯ ಕಾರ್ಯಕರ್ತರು ಮತ್ತು ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಜೆಡಿಎಸ್ ಒಂದು ಕುಟುಂಬದ ಪಕ್ಷ ಅಂತ ಎಲ್ಲರಿಗೂ ಗೊತ್ತು. ಪ್ರಧಾನಿ ನರೇಂದ್ರ ಮೋದಿ ಸಹ ಈ ಹಿಂಸೆ ಇದನ್ನು ಸಾಕಷ್ಟು ಬಾರಿ ಹೇಳಿದ್ದಾರೆ. ಜೆಡಿಎಸ್ ಜಾತ್ಯಾತೀತ ಪಕ್ಷ ಅಲ್ಲಾ ಒಂದು ಕುಟುಂಬದ ಪಕ್ಷ. ಕುಮಾರಸ್ವಾಮಿ ಮತ್ತು ದೇವೆಗೌಡರಿಗೆ ಜನರೇ ತಕ್ಕ ಪಾಠ ಕಲಿಸತ್ತಾರೆ ನಾವು ಅದನ್ನು ಕಾದು ನೋಡುತ್ತವೆ ಎಂದು ಅವರು ಹೇಳಿದರು.

More News

You cannot copy content of this page