Protest Against Arrest of Delhi CM Kejriwal: ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಹುಬ್ಬಳ್ಳಿಯಲ್ಲೂ ಕೇಂದ್ರಕ್ಕೆ ಧಿಕ್ಕಾರ..!

ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಮಾಡಿದ್ದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಪ್ರತಿಭಟನೆ ರ್ಯಾಲಿ ಮೂಲಕ ಆಗಮಿಸಿದ ಕಾರ್ಯಕರ್ತರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಬಕಾರಿ ನೀತಿ ಪ್ರಕರಣ ಸಂಬಂಧ ಇ.ಡಿ ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇವರ ಬಂಧನ ಖಂಡನೀಯವಾಗಿದೆ ಎಂದು ಎಎಪಿ ಇಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

More News