ಬಿಹಾರ : ಬಾಲಿವುಡ್ ನಟಿ ಹಾಗೂ ಮಾಡೆಲ್ ನೇಹಾ ಶರ್ಮಾ ಅವರು ರಾಜಕೀಯಕ್ಕೆ ಎಂಟ್ರಿ ನೀಡಲಿದ್ದಾರೆ ಎಂಬ ಮಾತುಗಳು ಇದೀಗ ಕೇಳಿಬರುತ್ತಿವೆ. ಅವರು ಬಿಹಾರದಿಂದ ಲೋಕಸಭೆಗೆ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿವೆ.
ಬಿಹಾರದ ಬಾಗಲ್ಪುರ್ ವಿಧಾನಸಭಾ ಕ್ಷೇತ್ರದ ಶಾಸಕ ಅಜಿತ್ ಶರ್ಮಾ ಅವರ ಪುತ್ರಿ ನೇಹಾ ಶರ್ಮಾ. ಇವರು ಅಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕರು. ಇವರಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಹೈಕಮಾಂಡ್ ಸೂಚಿಸಿದೆ.
ಆದರೆ, ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಈಗಾಗಲೇ ಶಾಸಕನಾಗಿದ್ದೇನೆ. ಕಾಂಗ್ರೆಸ್ ಲೋಕಸಭೆಗೆ ಟಿಕೇಟ್ ಕೊಟ್ಟರೆ, ನನಗೆ ಬೇಡ, ನನ್ನ ಮಗಳು ನೇಹಾ ನೀಡಿ, ಆಕೆ ಚುನಾವಣೆಗೆ ಸ್ಪರ್ಧಿಸಲಿದ್ದಾಳೆ ಎಂದು ತಿಳಿಸಿದ್ದಾರೆ.

ಆದರೆ, ಇಂಡಿಯಾ ಮೈತ್ರಿಕೂಟದಲ್ಲಿ ಜೆಡಿಯು ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯಾಗಿದ್ದರೂ ಯಾವ ಕ್ಷೇತ್ರ ಯಾರಿಗೆ ಎಂಬುದರ ಬಗ್ಗೆ ಇನ್ನು ಖಚಿತವಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಜಿತ್ ಶರ್ಮಾ ಬಾಗಲ್ಪುರ್ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ನೀಡಬೇಕೆಂದು ಮನವಿ ಮಾಡಿದ್ದಾರೆ.

ಟೆಕೇಟ್ ಕುರಿತು ಇನ್ನೆರೆಡು ದಿನಗಳಲ್ಲಿ ಅಂತಿಮವಾಗಲಿದ್ದು, ನೇಹಾ ಶರ್ಮಾ ಸ್ಪರ್ಧಿಸಲಿದ್ದಾರಾ ಅಥವಾ ಇಲ್ಲಾ ಎನ್ನುವುದು ಸ್ಪಷ್ಟವಾಗಲಿದೆ. ಆದರೆ ಈ ಸಂಬಂಧ ನೇಹಾ ಶರ್ಮಾ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ.