ತಿಪಟೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದರೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಕ್ಷೇತ್ರದ ಶಾಸಕ ಎಸ್ ಶ್ರೀನಿವಾಸ್, ಸ್ವಪಕ್ಷದವರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.
ತಿಟಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಸ್ಪೋಟಕ ಹೇಳಿಕೆ ನೀಡಿದ್ದು, ಇದೀಗ, ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಲೋಕಸಭಾ ಚುನಾವಣೆಯ ನಂತರ ಸಿಎಂ ಬದಲಾಗುತ್ತಾರೆ ಎಂಬ ಹೇಳಿಕೆ ನೀಡುವುದರ ಮೂಲಕ ಸಂದೇಶ ರವಾನೆ ಮಾಡಿದ್ದಾರೆ.
ಶ್ರೀನಿವಾಸ ಅವರ ಈ ಹೇಳಿಕೆಯಿಂದ ಸಿ.ಎಂ ಬದಲಾವಣೆಯ ಸುಳಿವು ಕೊಟ್ಟಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಸಿ.ಎಂ.ರಾಜಿನಾಮೆ ವಿಷಯ ಪ್ರಸ್ತಾಪಿಸಿದರು.

ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಅಂದ್ರೆ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜಿನಾಮೆ ಕೊಡಬೇಕಾಗುತ್ತೆ ಎಂದರು.
ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯನನ್ನು ಉಳಿಸುವ ಕೆಲಸ ನಾವೆಲ್ಲ ಮಾಡಬೇಕು, ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಲ್ಲಿಯೇ ಉಳಿಸುವ ಪ್ರಯತ್ನ ಮಾಡಬೇಕು ಎಂದು ಶ್ರೀನಿವಾಸ್ ಕರೆನೀಡಿದರು.