Search

BOLLYWOOD QUEEN KANGANA CONTESING LOK SABHA ELECTION: ಫೈರ್ ಬ್ರಾಂಡ್ ನಟಿ ಕಂಗನಾ ರಣಾವತ್ ಗೆ ಲೋಕಸಭೆ ಚುನಾವಣೆ ಟಿಕೆಟ್ ಘೋಷಿಸಿದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಪಕ್ಷ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು, ತನ್ನ 5ನೇ ಪಟ್ಟಿಯಲ್ಲಿ ನಟಿ ಕಂಗನಾ ರಣಾವತ್ ಅವರಿಗೆ ಕೂಡ ಟಿಕೆಟ್ ಘೋಷಣೆ ಮಾಡಿದೆ.
ಇದು ಅನೇಕರನ್ನು ಹುಬ್ಬೇರಿಸುವಂತೆ ಮಾಡಿದ್ದು, ಕಂಗನಾ ರಣಾವತ್ ಅವರು ಅವರ ಜನ್ಮ ಸ್ಥಳವಾದ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಇದೀಗ ಸ್ಪರ್ಧೆ ನಡೆಸಲಿದ್ದಾರೆ.

ಈ ಹಿಂದಿನಿಂದಲೂ ನರೇಂದ್ರ ಮೋದಿಯವರ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್ ಅವರು ಸಾಕಷ್ಟು ಪ್ರಶಸ್ತಿಗಳಿಗೂ ಆಯ್ಕೆಯಾಗಿದ್ದರು. ಆದರೆ ಅವರಿಗೆ ಸಾಕಷ್ಟು ವಿರೋಧದ ನಡುವೆಯೂ ಬಿಜೆಪಿ ಟಿಕೆಟ್ ನೀಡಿದ್ದು, ಸ್ಥಳೀಯರಲ್ಲಿ ಅಸಮಾಧಾನವನ್ನುಂಟು ಮಾಡಿದೆ. ಆದರೆ ಇದ್ಯಾವುದನ್ನು ಲೆಕ್ಕಕ್ಕೆ ಇಟ್ಟುಕೊಳ್ಳದ ಬಿಜೆಪಿ ಹೈಕಮಾಂಡ್ ಕಂಗನಾ ರಣಾವತ್ ಅವರಿಗೆ ಮಣೆಹಾಕಿದೆ. ಇದರಿಂದ ಅವರ ಫ್ಯಾನ್ಸ್ ಫುಲ್ ಖುಷ್ ಆಗಿದ್ದು, ಈ ಬಾರಿ ಫೈರ್ ಬ್ರಾಂಡ್ ನಟಿ ಲೋಕಸಭೆಗೆ ಆಯ್ಕೆಯಾಗಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಮ್ಮ ಆಯ್ಕೆಯ ಬಗ್ಗೆ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವ್ಯಕ್ತಪಡಿಸಿದ್ದು, ‘ನನ್ನ ಪ್ರೀತಿಯ ಭಾರತ ಮತ್ತು ಭಾರತೀಯ ಜನತಾ ಪಕ್ಷವು ಯಾವಾಗಲೂ ನನ್ನ ಬೇಷರತ್ ಬೆಂಬಲ ಹೊಂದಿದೆ. ಬಿಜೆಪಿ ರಾಷ್ಟ್ರೀಯ ನಾಯಕತ್ವವು ನನ್ನ ಜನ್ಮ ಸ್ಥಳ ಹಿಮಾಚಲ ಪ್ರದೇಶದಿಂದ ನನ್ನನ್ನು ಬಿಜೆಪಿ ಲೋಕಸಭಾ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಮಂಡಿ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತಿದ್ದೇನೆ. ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲು ನನಗೆ ಹೆಮ್ಮೆ ಮತ್ತು ಹರ್ಷವಿದೆ’ ಎಂದು ಹೇಳಿದ್ದಾರೆ.
ಕಂಗನಾ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಾನು ನಟಿ. ನಟನೆಗೆ ನನ್ನ ಮೊದಲ ಆಧ್ಯತೆ. ಆದರೆ ಕೃಷ್ಣನ ಆಶೀರ್ವಾದ ಸಿಕ್ಕರೆ ನಾನು ಫೈಟ್ ಮಾಡುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಕಂಗನಾ ಅವರು ಸದ್ಯಕ್ಕೆ ಎಮರ್ಜೆನ್ಸಿ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 1975ರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯ ಕುರಿತಾಗಿದೆ. ಈ ಚಿತ್ರದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರ ಮಾಡುತ್ತಿದ್ದಾರೆ.

More News

You cannot copy content of this page