Search

BIG RELIEF TO CONGRESS: ಕಾಂಗ್ರೆಸ್ ಗೆ ಬಿಗ್ ರಿಲೀಫ್ : 3500 ಕೋಟಿ ರೂಪಾಯಿ ವಸೂಲಿಗೆ ಬಲವಂತದ ಕ್ರಮವಿಲ್ಲ: ಸುಪ್ರೀಂಗೆ ಐಟಿ

ನವದೆಹಲಿ : ಸುಮಾರು 3500 ಕೋಟಿ ರೂಪಾಯಿ ತೆರಿಗೆ ಬಾಕಿ ಹಣ ಪಾವತಿಸುವಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿತ್ತು. ಆದರೆ, ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಆದಾಯ ತೆರಿಗೆ ಇಲಾಖೆ ಸೋಮವಾರ ತಿಳಿಸಿದೆ.
ಇದರಿಂದ ಕಾಂಗ್ರೆಸ್ ಗೆ ದೊಡ್ಡ ಮಟ್ಟದ ರಿಲೀಫ್ ದೊರೆದಂತಾಗಿದೆ. ಆದಾಯ ತೆರಿಗೆ ಇಲಾಖೆ ಕಳುಹಿಸಿದ್ದ ನೋಟಿಸ್ ಅನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರ ವಿಭಾಗೀಯ ಪೀಠಕ್ಕೆ ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಾನು, ಈ ಹೇಳಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಒಂದು ರಾಜಕೀಯ ಪಕ್ಷವಾಗಿದ್ದು, ಚುನಾವಣೆ ನಡೆಯುತ್ತಿರುವುದರಿಂದ ನಾವು ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಅಭಿಷಏಕ್ ಸಿಂಘ್ವಿ, ಇದು ಖುಷಿಯ ಸಂಗತಿ ಎಂದು ಆದಾಯ ತೆರಿಗೆ ಇಲಾಖೆಯ ಕ್ರಮವನ್ನು ಶ್ಲಾಘಿಸಿದ್ದಾರೆ.

More News

You cannot copy content of this page