Former MLA H. Ningappa Joins JDS: ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಹೆಚ್. ನಿಂಗಪ್ಪ ನಾಳೆ ಜೆಡಿಎಸ್ ಸೇರ್ಪಡೆ

ಬೆಂಗಳೂರು: ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಹೆಚ್.ನಿಂಗಪ್ಪ ಅವರು ಮಂಗಳವಾರ ಬೆಳಗ್ಗೆ ಜೆಡಿಎಸ್ ಪಕ್ಷ ಸೇರಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಹಿರಿಯ ನಾಯಕರಾದ ನಿಂಗಪ್ಪ ಅವರು ಪಕ್ಷಕ್ಕೆ ಮರಳುತ್ತಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದಿದ್ದಾರೆ.

ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ನಿಂಗಪ್ಪ ಅವರು ಪಕ್ಷಕ್ಕೆ ಸೇರಲಿದ್ದಾರೆ. ಈಗಾಗಲೇ ಅವರು ನನ್ನ ಜತೆ ಮಾತುಕತೆ ನಡೆಸಿದ್ದಾರೆ. ಮಾಜಿ ಪ್ರಧಾನಿಗಳು ಹಾಗೂ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಅವರ ಮನೆಗೆ ಭೇಟಿ ನೀಡಿದ್ದರು ಎಂದು ಅವರು ತಿಳಿಸಿದ್ದಾರೆ.

ಅಂದಹಾಗೆ; ನಿಂಗಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

More News

You cannot copy content of this page