Search

BJP HAS NEVER FULFILLED PROMISES: ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಡಿಕೇರಿ :ಏಪ್ರಿಲ್ -14: ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ , ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಪ್ರಶ್ನಿಸಿದರು.

ಪ್ರಪಂಚದಾದ್ಯಂತ ರಾಮಾಯಣ ಅಭಿವೃದ್ಧಿ ಹಾಗೂ ಅಯೋಧ್ಯೆಯ ಅಭಿವೃದ್ಧಿ ಕೈಗೊಳ್ಳುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಮಾತನಾಡಿ ಪ್ರಣಾಳಿಕೆಯನ್ನು ನೋಡಿಲ್ಲ. ನೋಡಿದ ನಂತರ ಉತ್ತರಿಸುವೆ ಎಂದರು.

ಅವಲೋಕನ ಅಗತ್ಯ
10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೊದಲು ಹೇಳಬೇಕು. ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು. ಬಿಜೆಪಿ ಸರ್ಕಾರ 25 ಕೋಟಿ ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 25 ಕೋಟಿ ಉದ್ಯೋಗ ಯಾರಿಗೆ ಕೊಟ್ಟಿದ್ದಾರೆ ಎಂದರು.

ಆರೋಗ್ಯ ವಿಚಾರಿಸಿದ್ದೇನೆ
ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸೋಲುವ ಭಯದಿಂದ ಸಿಎಂ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿರುವ ಬಗ್ಗೆ ಮಾತನಾಡಿ ನಾನು ಶ್ರೀನಿವಾಸ ಪ್ರಸಾದ್ ರಾಜಕೀಯದಲ್ಲಿ ಸಮಕಾಲೀನರು. ಅವರು 74ರಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಿದ್ದರು, ಒಟ್ಟಿಗೆ ರಾಜಕಾರಣದಲ್ಲಿದ್ದೆವು. ದೀರ್ಘ ಕಾಲದ ಸ್ನೇಹಿತ. ಅವರು ರಾಜಕೀಯದಿಂದ ನಿವೃತ್ತರಾಗಿ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದರು.

ಏಪ್ರಿಲ್ 18 ರಂದು ಮುಖ್ಯಮಂತ್ರಿಗಳು ಹಾಸನಕ್ಕೆ ಬರಲಿದ್ದು ಅವರು ಏನು ಹೇಳುತ್ತಾರೆ ಎಂದು ಕೇಳುತ್ತೇನೆ ಎಂದು ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.

ಹೆಣ್ಣುಮಕ್ಕಳ ಬಗ್ಗೆ ಕುಮಾರಸ್ವಾಮಿಯವರ ಮನಸ್ಥಿತಿ ಏನು ಎಂದು ಅರ್ಥವಾಗುತ್ತದೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿರುವ ಮಾಡಿ ಅವರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು ದಾರಿತಪ್ಪಿದ್ದಾರೆ ಎಂದರೇನು? ಅವರ ಹೇಳಿಕೆಯಿಂದ ಹೆಣ್ಣುಮಕ್ಕಳ ಬಗ್ಗೆ ಅವರಿಗಿರುವ ಭಾವನೆ ಏನು ಎಂದು ಅರ್ಥವಾಗುತ್ತದೆ. 2 ಬಾರಿ ಮುಖ್ಯಮಂತ್ರಿಯಾಗಿದ್ದರು ಈ ರೀತಿ ಮಾತನಾಡಿದರೆ ಜನ ಸಹಿಸುತ್ತಾರೆಯೇ ಎಂದರು.

ಎಷ್ಟು ದುಡ್ಡು ಬರುತ್ತದೆ ಎಂದು ವಿಜಯೇಂದ್ರ ಅವರಿಗೆ ತಿಳಿದಿದೆಯೇ?
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಯವರು ವಿದ್ಯುತ್, ಮದ್ಯ, ಬಸ್, ಸ್ಟಾಂಪ್ ಪೇಪರ್ ಬೆಲೆ ಹೆಚ್ಚು ಮಾಡಿ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದಕ್ಕೆಲ್ಲ ಎಷ್ಟು ದುಡ್ಡು ಬರುತ್ತದೆ ಎಂದು ವಿಜಯೇಂದ್ರ ಅವರಿಗೆ ತಿಳಿದಿದೆಯೇ? ಗ್ಯಾರಂಟಿ ಯೋಜನೆಗಳಿಗಾಗಿ ಒಂದು ವರ್ಷಕ್ಕೆ 56,000 ಕೋಟಿ. ರೂ.ಗಳ ಅಗತ್ಯವಿದೆ. ಅವುಗಳಿಂದ ಅಷ್ಟು ಹಣ ಬರುತ್ತದೆಯೇ ಎಂದು ಪ್ರಶ್ನಿಸಿದರು.

More News

You cannot copy content of this page