Search

Road Accident: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!

ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ.

ಭೀಕರ ಅಪಘಾತವಾಗಿದಲ್ಲಿ ಮೂವರು ಸಾವನ್ನಪ್ಪಿದ್ದಾರೆ‌. ಒರ್ವನಿಗೆ ಗಾಯಗಳಾಗಿದ್ದು, ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಬೆಳಗಿನ ಜಾವ ನಡೆದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪಾರ್ಚೂನರ್ ಕಾರನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌‌. ಮೃತರು ಆಂಧ್ರದ ಕರ್ನೂಲ ಜಿಲ್ಲೆಯ ನಿವಾಸಿಗಳಾಗಿದ್ದು, ಮೃತರ ಹೆಸರು ತಿಳಿದು ಬಂದಿಲ್ಲ. ಕಾರ್ ನಲ್ಲಿ ಮದ್ಯದ ಬಾಟಲ್ ಗಳು ಪತ್ತೆಯಾಗಿದ್ದು, ಕುಡಿದ ಮತ್ತಿನಲ್ಲಿ ಅಪಘಾತವಾಗಿರೋ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

More News

You cannot copy content of this page