ಬೆಂಗಳೂರು: ರಾಮನವಮಿಯಂದು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನು ಅನ್ಯಕೋಮಿನ ಕೆಲ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಉತ್ತರ ದ ವಿದ್ಯಾರಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಎಂಎಸ್ ಪಾಳ್ಯದಲ್ಲಿ ಜರುಗಿದೆ.
ಕಾರಿನಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ತೆರಳುತ್ತಿದ್ದವರ ಮೇಲೆ ಹಲ್ಲೆ ಮಾಡಿ, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ವಿದ್ಯಾರಣ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಮೀರ್, ಫರ್ಮಾನ್ ಮತ್ತು ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪೆಡಿದಿದ್ದಾರೆ. ಹಲ್ಲೆಗೊಳಗಾದವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಹಲ್ಲೆಗೊಳಗಾದವರ ಮನೆಗೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ. ಇದು ರಾಜ್ಯ ಸರ್ಕಾರದ ನೀತಿಯಿಂದಾಗಿ ನಡೆದ ಘಟನೆ ಎಂದು ಆರೋಪಿಸಿದ್ದಾರೆ.