ಹುಬ್ಬಳ್ಳಿ: ಕಳೆದ ಎರಡು ದಿನಗಳಿಂದ ಮಳೆಯಿಂದ ತಣ್ಣಗಾಗಿದ್ದ ಹುಬ್ಬಳ್ಳಿ ನಗರದಲ್ಲಿ ಕಾಲೇಜಿನ ಕ್ಯಾಂಪಸನೊಳಗೆ ಇಂದು ನಡೆದ ವಿದ್ಯಾರ್ಥಿನಿಯ ಕೊಲೆ ಹುಬ್ಬಳ್ಳಿ ಜನರನ್ನು ಬೆಚ್ಚಿ ಬೀಳಿಸಿದೆ. ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನಲ್ ಈ ಘಟನೆ ನಡೆದಿದ್ದು. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ಮಾಸ್ಕ್ ಧರಿಸಿದ ವ್ಯಕ್ತಿಯೋರ್ವ ಬಿವಿಬಿ ಕಾಲೇಜಿನ ಆವರಣದೊಳಗೆ ಬಂದು ವಿದ್ಯಾರ್ಥಿಯನ್ನು ಮನಬಂದಂತೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ನಡೆದಿದೆ. ಈ ಘಟನೆಯಿಂದ ಇದೀಗ ವಿದ್ಯಾರ್ಥಿ ಸಮೂಹ ಬೆಚ್ಚಿ ಬಿದ್ದಿದೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ MCA ಫಸ್ಟ್ ಇಯರ್’ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ, ಈಕೆಯ ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಕಾಲೇಜಿನಲ್ಲಿ ಇಂದು ಪರೀಕ್ಷೆಯಿದ್ದ ಕಾರಣ ಪರೀಕ್ಷೆ ಬರೆಯಲು ತೆಳಿದ್ದ ವೇಳೆ ಅಪರಿಚಿತ ದುಷ್ಕರ್ಮಿಯೋರ್ವ ಏಕಾಏಕಿ ಕುತ್ತಿಗೆ, ಹೊಟ್ಟೆ , ಬೆನ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ನೇಹಾ ತೀವ್ರ ರಕ್ತದ ಮಡುವಿನಲ್ಲಿ ಕಾಲೇಜಿನ ಆವರಣದಲ್ಲಿಯೇ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸಹಪಾಠಿಗಳು ಹಾಗೂ ಕಾಲೇಜಿನ ಪ್ರೊಫೆಸರ್ ಗಳು ಆಕೆಯನ್ನು ಎತ್ತಿಕೊಂಡು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದಾಗಿದ್ದಾರೆ.
ಆದರೆ, ಚಿಕಿತ್ಸೆ ಫಲಿಸದೇ ನೇಹಾ ಮೃತಪಟ್ಟಿದ್ದಾಳೆ. ಇನ್ನೂ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿಷಯ ತಿಳಿದು ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಅನೇಕ ಮುಖಂಡರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ದೂರು ದಾಖಲಿಸಿಕೊಂಡ ವಿದ್ಯಾನಗರಿ ಪೊಲೀಸರು ತನಿಖೆ ಕೈಗೊಂಡಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಆರೋಪಿ ಯಾವ ಉದ್ದೇಶದಿಂದ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪಾಲಿಕೆ ಸದಸ್ಯನ ಪುತ್ರಿಯ ಕೊಲೆ ಇದೀಗ ಹುಬ್ಬಳ್ಳಿ ನಗರದ ಜನತೆಯನ್ನು ತಲ್ಲಣಗೊಳಿಸಿದೆ.
ಕಾಲೇಜ್ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ: ಯುವಕನ ಬಂಧನ
ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ.
ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ.
ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ
ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫಯಾಜ್‌ನ್‌ನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫಯಾಜ್‌ನನ್ನು ಬಂಧಿಸಿದ್ದಾರೆ.